ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಷರೀಫ್(85) ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ನೆರವೇರಿದ್ದು, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭಾ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಕೇಂದ್ರ ಮಾಜಿ ಸಚಿವ ಗುಲಾಂ ನಬಿ ಆಜಾದ್, ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಯುಟಿ ಖಾದರ್, ಎಐಸಿಸಿ ಮುಖಂಡ ಗುಲಾಮ್ ನಬಿ ಆಜಾದ್, ಸೇರಿದಂತೆ ಹಲವಾರು ಅಂತಿಮ ದರ್ಶನ ಪಡೆದರು. ಖುದ್ದೂಸ್ ಸಾಬ್ ಸ್ಮಶಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.










