ಮಂಗಳೂರು: ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೋಟ ಬೆಂಗ್ರೆಯಲ್ಲಿ ನವೆಂಬರ್ 18ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ಯುವಜೋಡಿ ಕಡಲ ತೀರಕ್ಕೆ ವಿಹಾರಕ್ಕೆಂದು ಬಂದಿದ್ದರು. ಈ ವೇಳೆ ಏಳು ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ಯುವತಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಸಂತ್ರಸ್ಥ ಯುವತಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.










