ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಸಾವು…

155
firstsuddi

 ಚೆನ್ನೈ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಮೃತಪಟ್ಟಿರುವ ಘಟನೆ ನಗರದ ಮಸ್ಜಿದ್ ಕಾಲೋನಿಯಲ್ಲಿ ನಡೆದಿದೆ. ಮೋಹನ್ (50) ಮೃತ ದುರ್ಧೈವಿ ಎಂದು ಗುರುತಿಸಲಾಗಿದೆ. ಚಹಾ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಮೋಹನ್ ಅವರು ಇಂದು ಕೂಡಾ ಎಂದಿನಂತೆ ಅಂಗಡಿಗೆ ತೆರಳಿ ಗ್ಯಾಸ್ ಹೊತ್ತಿಸುವ ವೇಳೆ ಸಿಲಿಂಡರ್ ಸ್ಪೋಟಗೊಂಡು ಏಕಾಏಕಿ ಮೈಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಮೋಹನ್ ಅವರು ಅಂಗಡಿಯಿಂದ ರಸ್ತೆಗೆ ಓಡಿ ಬಂದಿದ್ದಾರೆ. ಇದನ್ನು ಗಮನಿಸಿದ ಸ್ಥಳಿಯರು ಅವರನ್ನು ಕೂಡಲೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮೋಹನ್ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಈ ಕುರಿತು ಗಿಂಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.