ಬೆಂಗಳೂರು: ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ರಾಜ್ಯದ ಯೋಧ ಹೆಚ್.ಗುರು (33) ಅವರು ಹುತಾತ್ಮರಾಗಿದ್ದಾರೆ. ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಅವರು ಸಂತಾಪ ಸೂಚಿಸಿದ್ದಾರೆ. ನಿನ್ನೆ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಶ್ರೀ ಎಚ್. ಗುರು ಅವರು ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ಚಿಕ್ಕ ವಯಸ್ಸಿನಲ್ಲೇ ದೇಶಸೇವೆಗೆ ಜೀವನ ಮುಡಿಪಾಗಿಟ್ಟಿದ್ದ ಗುರು ಯುವಕರಿಗೆ ಮಾದರಿಯಾಗಿದ್ದರು. ಮೃತ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ, ಯೋಧನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವಿಟ್ ಮೂಲಕ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ .ಬಿ.ಎಸ್ ಯಡಿಯೂರಪ್ಪ ಅವರು ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧರಾದ ಎಚ್ ಗುರು ಅವರ ನಿವಾಸಕ್ಕೆ ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.











