ಬೆಂಗಳೂರು: ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ್ ಅವರು ಸೋಮನಹಳ್ಳಿಯ ಬಗರ್ ಹುಕುಂ ಭೂಪ್ರದೇಶದಲ್ಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದಾಗಿ ಆರೋಪಿಸಲಾಗಿತ್ತು. ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಆದೇಶ ನೀಡಿದ್ದಾರೆ.










