ಕೊರೊನಾ ಭೀತಿಯ ಬಳಿಕ ಗಂಡ-ಹೆಂಡತಿ ಜಗಳ ಹೆಚ್ಚಾಗಿದೆ-ಪೊಲೀಸ್ ಆಯುಕ್ತ ಭಾಸ್ಕರ್ ರಾವ್.

874
firstsuddi

ಬೆಂಗಳೂರು : ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕಫ್ರ್ಯೂಗೆ ಕರೆ ನೀಡಿರುವ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಕೊರೊನಾ ಭಿತಿಯ ಬಳಿಕ ರಾಜ್ಯದಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಕಡಿಮೆ ಆಗಿದೆ. ಆದರೆ ರಸ್ತೆ ಖಾಲಿಯಾಗಿರುವುದರಿಂದ ಅಪಘಾತಗಳು ಹೆಚ್ಚಾಗಿವೆ. ಅಲ್ಲದೆ ಗಂಡ ಹೆಂಡತಿ ಜಗಳ ಕೂಡಾ ಹೆಚ್ಚಾಗಿವೆ. ಆತ್ಮಹತ್ಯೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ನಾಳೆ ಪ್ರಧಾನಿ ಮೋದಿ ಅವರು ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ನಿರ್ಲಕ್ಷ ತೋರಬಾರದು. ಇದನ್ನು ಲಘುವಾಗಿ ಪರಿಗಣಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಕೊರೊನಾ ವಿರುದ್ಧ ಹೋರಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.