ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನದಂದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಇಬ್ಬರು ಪಕ್ಷೇತರ ಶಾಸಕರು ಶಾಕ್ ನೀಡಿದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸ್ ಪಡೆದಿದ್ದಾರೆ. ರಾಣಿಬೆನ್ನೂರು ಪಕ್ಷೇತರ ಶಾಸಕ, ಮಾಜಿ ಅರಣ್ಯ ಸಚಿವ ಆರ್ ಶಂಕರ್, ಹಾಗೂ ಮುಳಬಾಗಿಲು ಪಕ್ಷೇತರ ಶಾಸಕ ಹೆಚ್ ನಾಗೇಶ್ ಅವರು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ.