ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮೇಲೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ.- ಸುಪ್ರೀಂಕೋರ್ಟ್…

393
firstsuddi

ದೆಹಲಿ: ಜಂತರ್ ಮಂತರ್ ಹಾಗೂ ಬೋಟ್ ಕ್ಲಬ್ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು. ಈ ಕುರಿತು ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎ.ಕೆ.ಸಿಕ್ರಿ , ಹಾಗೂ ಅಶೋಕ್ ಭೂಷಣ್ ಅವರನ್ನು ಒಳಗೊಂಡ ಪೀಠ ಆದೇಶ ನೀಡಿದ್ದು, ಪ್ರತಿಭಟನೆಗಳಿಗೆ ನಿಷೇಧ ಹೇರಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ( ಎನ್.ಜಿ.ಟಿ) ಆದೇಶವನ್ನು ತೆರವುಗೊಳಿಸಿತು. ಶಾಂತಿಯುತ ಪ್ರತಿಭಟನೆಗೆ ಸಾರ್ವಜನಿಕರಿಗೆ ಅವಕಾಶವಿದೆ. ನಾಗರಿಕರ ಹಕ್ಕುಗಳ ಸಂಘರ್ಷದ ನಡುವೆ ನಾವು ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವಿದೆ. ಇಂಥ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸುವುದರ ಮೇಲೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ.ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.