ಗೋವಾದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಅದ್ದೂರಿ ವಿವಾಹ…

171
firstsuddi

ಬೆಳಗಾವಿ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ವಿವಾಹ ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಭದ್ರಾವತಿ ಶಾಸಕ ಸಂಗಮೇಶ್ವರ ಅವರ ಸಹೊದರ ಶಿವಕುಮಾರ್ ಅವರ ಪುತ್ರಿ ಡಾ. ಹಿತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಈ ವಿವಾಹ ಸಮಾರಂಭಕ್ಕೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಯು.ಟಿ ಖಾದರ್, ಅವಧೂತ ವಿನಯ್ ಗುರೂಜಿ ಹಾಗೂ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಗವಹಿಸಿ ನೂತನ ವಧು-ವರರಿಗೆ ಆಶೀರ್ವಧಿಸಿದರು.