ಗ್ರಾ,ಪಂ. ಸದಸ್ಯ ಸತೀಶ್ ಮತ್ತಿಕಟ್ಟೆ ಬರೆದ ಪತ್ರಕ್ಕೆ ಪ್ರಧಾನಿ ಸ್ಪಂದನೆ.

1312
firstsuddi

ಮೂಡಿಗೆರೆ- ಬಣಕಲ್ ಗುಡ್ಡಟ್ಟಿ ರಸ್ತೆ ಅಭಿವೃದ್ದಿ ಮಾಡುವಂತೆ ಬಣಕಲ್ ಗ್ರಾ.ಪಂ ಸದಸ್ಯ ಸತೀಶ್ ಮತ್ತಿಕಟ್ಟೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸ್ಪಂದನೆ ದೊರೆತ್ತಿದ್ದು, ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳ ಕಚೇರಿಗೆ ಸೂಚನೆ ನೀಡಲಾಗಿದೆ.ಮಾರ್ಚ್ ತಿಂಗಳ 19 ರಂದು ಗ್ರಾ.ಪಂ ಸದಸ್ಯ ಸತೀಶ್ ಮತ್ತಿಕಟ್ಟೆ ಪರಿಶಿಷ್ಟ ಜಾತಿ ಪಂಗಡದವರೆ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಗುಡ್ಡಟ್ಟಿ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು ಹಲವು ವರ್ಷದಿಂದ ದುರಸ್ಥಿ ಮಾಡದೆ ಇರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಅಭಿವೃದ್ದಿ ಪಡಿಸಿಕೊಡಿಸುವಂತೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.ಇದಕ್ಕೆ ಸ್ಪಂದಿಸಿ ಪ್ರಧಾನಿ ಕಚೇರಿಯಿಂದ ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಚೇರಿಗೆ ಸೂಚಿಸಲಾಗಿದ್ದು ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮತ್ತು ತಾಲ್ಲೂಕು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚಿಸಲಾಗಿದೆ.

firstsuddi

ಈ ಬಗ್ಗೆ ಕೆಲ ದಿನಗಳ ಹಿಂದೆ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಬಣಕಲ್ ಗ್ರಾ.ಪಂ ಅಧ್ಯಕ್ಷ ಸುರೇಶ್ ಮತ್ತು ಸದಸ್ಯ ಸತೀಶ್ ಮತ್ತಿಕಟ್ಟೆ ಅವರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಾಲ್ಲೂಕು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಶೇಖರ್, ಬಣಕಲ್ ಗುಡ್ಡಟ್ಟಿ ರಸ್ತೆ ದುರಸ್ಥಿಗೆ ಸುಮಾರು 150.00 ಲಕ್ಷಗಳ ಅನುದಾನ ಬೇಕಾಗಿರುವುದರಿಂದ ಈ ಭಾಗದ ಚುನಾಯಿತ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಆಧ್ಯತೆ ಮೇರೆಗೆ ಈ ರಸ್ತೆಯನ್ನು ಕೈಗೆತ್ತಿಕೊಳ್ಳುವಂತೆ ಮನವೊಲಿಸಿ ಸರ್ಕಾರದ ಹಣ ಬಿಡುಗಡೆಯಾದ ನಂತರ ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.