ಹೊರನಾಡು ಗ್ರಾಮ ಪಂಚಾಯಿತಿ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ…

848
firstsuddi

ಮೂಡಿಗೆರೆ: ತಾಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ಹಾಗೂ ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು,  ನಾಡಕಚೇರಿ,ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿದ್ದು, ನಾಡಕಚೇರಿ ಹಾಗೂ ಗ್ರಾಮ ಪಂಚಾಯಿತಿ ವಿರುದ್ಧ ಸ್ಥಳಿಯರು ದೂರು ನೀಡಿದ ಹಿನ್ನಲೆ ಲೋಕಾಯುಕ್ತ ಇನ್ಸ್‌ಪೆಕ್ಟರ್  ಸಚಿನ್ ನೇತೃತ್ವದ ತಂಡ  ಎರಡು ಕಚೇರಿಗಳಲ್ಲೂ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಸದಸ್ಯರು ಹಾಗೂ ಅಧಿಕಾರಿಗಳ ವಿಚಾರಣೆಯನ್ನು ನಡೆಸುತ್ತಿದ್ದಾರೆ.