ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ವಿವಾದ ಎದುರಾಗಿದ್ದು, ಇಂದು ನ್ಯಾಯಾಧೀಕರಣ ಮಹತ್ವದ ತೀರ್ಪು ನೀಡಿದ್ದು ಕುಡಿಯುವ ನೀರಿನ ಉದ್ದೇಶಕ್ಕಾಗಿ 5.5 ಟಿಎಂಸಿ ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿ 8.02 ನೀರು ಸೇರಿದಂತೆ ರಾಜ್ಯಕ್ಕೆ ಒಟ್ಟು 13.5 ಟಿಎಂಸಿ ನೀರು ನಿಗದಿ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ನಗರದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ ಮಲಪ್ರಭಾ ಜಲಾಶಯಕ್ಕೆ ನೀರು ತಿರುಗಿಸುವ ಕರ್ನಾಟಕದ ಪ್ರಸ್ತಾಪಕ್ಕೆ ನ್ಯಾಯ ಮಂಡಳಿ ಒಪ್ಪಿದೆ. ಮಲಪ್ರಭೆಗೆ 4 ಟಿಎಂಸಿ ನೀರು ನೀಡಿದ್ದು, ಇನ್ನು 1.5 ಟಿಎಂಸಿ ನೀರನ್ನು ಮಹದಾಯಿ ನದಿ ಪಾತ್ರಕ್ಕೆ ಮೀಸಲಿಟ್ಟಿದ್ದು, ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿ 8.02 ಟಿಎಂಸಿ ನೀರನ್ನು ನೀಡಿದ್ದು, ನ್ಯಾಯಮಂಡಳಿ ಕರ್ನಾಟಕಕ್ಕೆ ಹಂಚಿಕೆ ಮಾಡಿ ಅಂತಿಮ ತೀರ್ಪು ನೀಡಿದೆ.