ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ನಾಯಕರ ಸಭೆ ಕರೆದಿದ್ದು, 2019ರ ಲೋಕಸಭೆ ಚುನಾವಣೆಯ ಸಿದ್ಧತೆಯ ಬಗ್ಗೆ ಸಮಲೋಚನೆ ನಡೆಯಲಿದ್ದು, ಸಂಸದರು, ಶಾಸಕರು,ಮಾಜಿ ಸಂಸದರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.