ಮುಂಬೈ– ಮಹಾನಗರಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಮತ್ತೊಮ್ಮೆ ಪ್ರವಾಹದಲ್ಲಿ ಮುಳುಗುವ ಭೀತಿಯಲ್ಲಿದೆ. ಗುರುವಾರವಷ್ಟೆ ಮುಂಬೈ ಪ್ರವೇಶಿಸಿದ ಮುಂಗಾರು ಭಾರೀ ಮಳೆಯಾಗುತ್ತಿದ್ದು, ಹವಮಾನ ಇಲಾಖೆಯು ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ್ದು ಮುಂದಿನ ಎರಡು ದಿನಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ. ಎಂದು ಹವಮಾನ ಇಲಾಖೆ ತಿಳಿಸಿದೆ. ಕೊಲಬಾ,ವರ್ಲಿ,ಘಟ್ಕೋಪರ್,ಟ್ರೊಂಬೆ,ಮಲಾಡ್,ಪ್ರವಾಹ ಸಾÀಧ್ಯತೆಯೂ ಹೆಚ್ಚಾಗಿರುವುದರಿಂದ ಈ ಪ್ರದೇಶದಲ್ಲಿ ನೌಕಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಮಳೆಯಿಂದ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಲಿಕೆ ಉಪ ಆಯುಕ್ತರು ಮತ್ತು ಸಹಾಯಕ ಆಯುಕ್ತರು ಸೇರಿದಂತೆ ಎಲ್ಲಾ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಮಹಾನಗರ ಪಾಲಿಕೆ ಮೂಲಗಳು ತಿಳಿಸಿದೆ. ಹವಮಾನ ಇಲಾಖೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ್ದರು ಕೂಡ ಯಾವುದೇ ತರದ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.