ಮಹಿಳಾ ಸಬ್‍ಇನ್ಸ್‌ಪೆಕ್ಟರ್ ಗೆ ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು…

309
firstsuddi

ನವದೆಹಲಿ : ಮಹಿಳಾ ಸಬ್ ಇನ್ಸ್‌ಪೆಕ್ಟರ್ ಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ. ಪ್ರೀತಿ ಅಹ್ಲವಾತ್(26) ಹತ್ಯೆಯಾದ ಎಸ್‍ಐ ಎಂದು ಗುರುತಿಸಲಾಗಿದ್ದು, ದೆಹಲಿಯ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೀತಿ ಅಹ್ಲವಾತ್ ಅವರು ನಿನ್ನೆ ರಾತ್ರಿ 9:30 ರ ಸುಮಾರಿಗೆ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ರೋಹಿಣಿ ಪ್ರದೇಶದ ಮೆಟ್ರೋ ಸ್ಟೇಷನ್ ಬಳಿ ದುಷ್ಕರ್ಮಿಗಳು ಪ್ರೀತಿ ಅವರ ತಲೆಗೆ ಮೂರು ಸುತ್ತು ಗುಂಡು ಹಾರಿಸಿದ್ದು, ಪರಿಣಾಮ ಪ್ರೀತಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.