ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು…

162
firstsuddi

ಬೆಂಗಳೂರು : ವಿವಿಧ ಪ್ರಕರಣಗಲ್ಲಿ ಭಾಗಿಯಾಗಿ ಸೆನೆಗಲ್ ದೇಶದ ಜೈಲಿನಲ್ಲಿದ್ದ ಮಲ್ಪೆ ಮೂಲದ ಭೂಗತ ಪಾತಕಿ ರವಿ ಪೂಜಾರಿ(52) ಅವರನ್ನು ದಕ್ಷಿಣ ಆಫ್ರೀಕಾದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ಪೊಲೀಸರು ಅವರನ್ನು ಪಡೆದುಕೊಂಡಿದ್ದಾರೆ. ಕೊಲೆ, ಜೀವಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಒಂದೂವರೆ ವರ್ಷದಿಂದ ಸೆನೆಗಲ್ ದೇಶದಲ್ಲಿ ಜೈಲಿನಲ್ಲಿದ್ದ  ರವಿ ಪೂಜಾರಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಹಲವಾರು ಪ್ರಯತ್ನ ನಡೆದಿತ್ತು. ಆದರೆ ಎರಡೂ ದೇಶಗಳ ಮಧ್ಯೆ ಒಪ್ಪಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ಹಸ್ತಾಂತರ ವಿಳಂಬವಾಗಿತ್ತು. ಈಗಾ ಹಸ್ತಾಂತರ ಪ್ರಕ್ರಿಯೆಯಲ್ಲಿ ಇದ್ದ ತೊಂದರೆಗಳು ನಿವಾರಣೆಯಾದ ಹಿನ್ನೆಲೆ, ನಾಲ್ವರು ಸದಸ್ಯರನ್ನೊಳಗೊಂಡ ಕರ್ನಾಟಕ ಪೊಲೀಸ್ ತಂಡ ರವಿ ಪೂಜಾರಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಮಡಿವಾಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಇಂದು ಬಿಗಿ ಭದ್ರತೆಯಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಿದ್ದಾರೆ. ರವಿ ಪೂಜಾರಿ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 49 ಪ್ರಕರಣಗಳು ದಾಖಲಾಗಿವೆ.