ಚಿಕ್ಕಮಗಳೂರು : ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಗಾಯಾಳುಗಳು ಮತ್ತು ರೋಗಿಗಳ ಪ್ರಾಣ ಉಳಿಸಲು ಮುಂದಾಗಬೇಕು ಎಂದು ಕಿಸಾನ್ ಖೇತ್ ಮಜ್ದೂರ್ ಕಾಂಗ್ರೇಸ್‍ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಮನವಿ ಮಾಡಿದರು. ಕಾಂಗ್ರೇಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ವಿವಿಧ ಘಟಕಗಳ ಕಾರ್ಯಕರ್ತರು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತುರ್ತು ಸಂದರ್ಭಗಳಲ್ಲಿ ಔಷಧಿ ಸೇರಿದಂತೆ ಇನ್ನಿತರ ಯಾವುದೇ ವಸ್ತುಗಳನ್ನು ಹಣಕೊಟ್ಟು ಕೊಳ್ಳಬಹುದು ಆದರೆ ರಕ್ತವನ್ನು ಖರೀದಿಸಲು ಸಾಧ್ಯವಿಲ್ಲ ರಕ್ತಕ್ಕೆ ಬೇರೆ ಯಾವುದೇ ಪರ್ಯಾಯವಿಲ್ಲ ಎಂದ ಅವರು ಇಂತಹ ಸನ್ನಿವೇಶಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರೆ ಮಾತ್ರ ಗಾಯಾಳುಗಳನ್ನು ರೋಗಿಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದರು. ಯುವ ಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಷರೀಫ್ ಮಾತನಾಡಿ ಸಾರ್ವಜನಿಕರು ರಕ್ತ ನೀಡುವುದನ್ನು ದಾನವೆಂದು ಪರಿಗಣಿಸಬಾರದು ಅದನ್ನು ತಮ್ಮ ಜವಾಬ್ದಾರಿ ಎಂದು ತಿಳಿಯಬೇಕು ಎಂದು ಕಿವಿಮಾತು ಹೇಳಿದರು.
ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದುದು ರಕ್ತದಾನ, ರಕ್ತದಾನ ಮಾಡುವುದೆÉಂದರೆ ಪ್ರಾಣದಾನ ಮಾಡಿದಂತೆ ಎಂದ ಅವರು ಇದನ್ನು ಸಾರ್ವಜನಿಕರು ಅರಿಯಬೇಕು, ರಕ್ತದಾನಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದರು. ಕಾಂಗ್ರೇಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ನವಾಜ್ó, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಶಾದಾಬ್ ಆಲಂ ಖಾನ್, ಯುವ ಕಾಂಗ್ರೇಸ್ ಉಪಾಧ್ಯಕ್ಷ ಜೆ.ವಿನಾಯಕ, ಮಧು, ಮುಖಂಡರಾದ ನೂರ್ ಅಹಮದ್, ಅಕ್ರಂ, ರಿಜ್ವಾನ್, ಸಾದಿಕ್, ಅಜ್ಗರ್ ಉಪಸ್ಥಿತರಿದ್ದರು.