ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆಗೊಳಿಸಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಮಾರ್ಗರೇಟ್ ಆಳ್ವ, ಎಚ್.ಎಲ್. ದತ್ತು, ಜೈ ಜಗದೀಶ್ ಸೇರಿದಂತೆ 63 ಗಣ್ಯರಿಗೆ ಪ್ರಶಸ್ತಿ ಲಭಿಸಲಿದೆ.











