ಬೆಂಗಳೂರು : ಖ್ಯಾತ ಹಿರಿಯ ಇತಿಹಾಸಕಾರ ಷ. ಶೆಟ್ಟರ್(85) ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಇತರೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದ ಷ. ಶೆಟ್ಟರ್ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಷ.ಶೆಟ್ಟರ್ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಬಳಗದವರನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಹೊಸಕೋಟೆಯಲ್ಲಿ ಇರುವ ಅವರ ಜಾಗ ಅಥವಾ ಚಾಮರಾಜಪೇಟೆಯ ಚಿತಾಗಾರದಲ್ಲಿ ಲಿಂಗಾಯತ ಸಂಪ್ರದಾಯದಂತೆ ನಡೆಸಲಾಗುತ್ತದೆ ಎಂದು ಕುಟುಂಬ ಮೂಳಗಳಿಂದ ತಿಳಿದು ಬಂದಿದೆ.










