ಶಾಲಾ ಬಸ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ…

254
firstsuddi

ಬೆಂಗಳೂರು:  ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ  ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊರವಲಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮದ ಬಳಿ ನಡೆದಿದೆ.ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಶಾಲಾ ಬಸ್ ನಲ್ಲಿ 10ಕ್ಕೂ ಹೆಚ್ಚು ಮಕ್ಕಳಿದ್ದು ಬಾರಿ ಅನಾಹುತದಿಂದ ಪಾರಾಗಿದ್ದಾರೆ. ಘಟನೆ ನಡೆದ ಬಳಿಕ ಶಾಲಾ ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.