ಮಂಡ್ಯ : ಕಳೆದ ವರ್ಷ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ವೀರಯೋಧ ಗುರು ಅವರ ಸ್ಮಾರಕ ನಿರ್ಮಾಣ ಮಾಡಲು 25 ಲಕ್ಷ ರೂ ಹಣವನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ವೀರಯೋಧ ಗುರು ಅವರು ಹುತಾತ್ಮರಾಗಿ ಒಂದು ವರ್ಷ ಕಳೆದರೂ ಸ್ಮಾರಕ ನಿರ್ಮಾಣವಾಗದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡ್ಯ ಜಿಲ್ಲಾಧಿಕಾರಿಗಳ ಹೆಸರಿಗೆ ಸ್ಮಾರಕ ನಿರ್ಮಾಣಕ್ಕೆಂದು 25 ಲಕ್ಷ ರೂ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರತಿಕ್ರಯಿಸಿದ ಯೋಧ ಗುರು ಅವರ ಕುಟುಂಬಸ್ಥರು ಸ್ಮಾರಕ ನಿರ್ಮಾಣ ಮಾಡಲು ಹಣ ಬಿಡುಗಡೆ ಮಾಡಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.










