ಚಿಕ್ಕಮಗಳೂರು: ಯುವಜನತೆ ಶಿಕ್ಷಣದ ಜೊತೆಜೊತೆಗೆ ವಿದ್ಯಾಭ್ಯಾಸದ ನಂತರ ತಾವು ಮಾಡುವ ವೃತ್ತಿಯ ಬಗ್ಗೆಯೂ ತರಬೇತಿಯನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಎಂಇಎಸ್ ಕಾಲೇಜಿನ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್ ಕುಮಾರ್ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ಎಂಇಎಸ್ ಛೇಂಬರ್ ಆಫ್ ಕಾಮರ್ಸ್ ಎಂ.ಕಾಂ, ಎಂಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ವಿದ್ಯಾರ್ಥಿಗಳಿಗಾಗಿ ಗುರುವಾರ ಆಯೋಜಿಸಿದ್ದ ವಾಣಿಜ್ಯ ಮತ್ತು ಗಣಕ ವಿಭಾಗದ ವೃತ್ತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ತಾವು ಮುಂದೆ ಏನಾಗಬೇಕು ಎಂಬ ಗುರಿ ವಿದ್ಯಾರ್ಥಿ ದೆಸೆಯಲ್ಲೇ ಇರಬೇಕು, ಅದಕ್ಕೆ ತಕ್ಕಂತೆ ಶಿಕ್ಷಣವನ್ನು ಪಡೆಯಬೇಕು ಆಗ ಮಾತ್ರ ಅವರು ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಂಇಎಸ್ ಛೇಂಬರ್ ಆಫ್ ಕಾಮರ್ಸ್‍ನ ಕಾರ್ಯದರ್ಶಿ ಕೆ.ಎನ್.ಮಂಜುನಾಥ ಭಟ್ ವಿದ್ಯಾಭ್ಯಾಸದ ನಂತರ ವಿದ್ಯಾರ್ಥಿಗಳು ಕೈಗೊಳ್ಳುವ ವೃತ್ತಿಯ ಬಗ್ಗೆ ಅವರಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು, ವಿಜೇತರಿಗೆ ಬಹುಮಾನ ವಿತರಿಸಲಾಯಿತು, ಸಂಸ್ಥೆಯ ಆಡಳಿತಾಧಿಕಾರಿ ಎಸ್.ಶಾಂತಕುಮಾರಿ, ಛೇಂಬರ್ ಆಫ್ ಕಾಮರ್ಸ್‍ನ ಉಪಾಧ್ಯಕ್ಷ ಡಾ|| ಹೆಚ್.ವಿಷ್ಣುವರ್ಧನ್, ಖಜಾಂಚಿ ಜಿ.ಎಂ.ಅವಿನಾಶ್, ಸಹಕಾರ್ಯದರ್ಶಿ ಫಾತಿಮಾ ಶಿರೀನ್, ರಾಮಿಯಾ ಬರೀನ್, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಆರ್.ಎ.ಪುಪ್ಷಾವತಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸುಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು, ತೃಪ್ತಿ ಸ್ವಾಗತಿಸಿದರು, ಫಾತಿಮ ವಂದಿಸಿದರು.
Home ಸ್ಥಳಿಯ ಸುದ್ದಿ ಮಕ್ಕಳಿಗೆ ತಾವು ಮುಂದೆ ಏನಾಗಬೇಕು ಎಂಬ ಗುರಿ ವಿದ್ಯಾರ್ಥಿ ದೆಸೆಯಲ್ಲೇ ಇರಬೇಕು: ಡಾ|| ಡಿ.ಎಲ್.ವಿಜಯ್ ಕುಮಾರ್…










