ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್…

387
firstsuddi

ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ಯೋಜನೆ ಆಧಾರ್ ಕಾರ್ಡ್​ ನಾಗರಿಕರ ಖಾಸಗಿತನಕ್ಕೆ ಧಕ್ಕೆ ತರುತ್ತದೆ ಎನ್ನುವ ಕುರಿತಾಗಿ ಸುಪ್ರೀಂನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದ್ದು,ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ. ನಕಲಿ ಆಧಾರ್ ಕಾರ್ಡ್ ಸೃಷ್ಟಿಯೂ ಸಾಧ್ಯವಿಲ್ಲ. ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲು ಸಾಧ್ಯವಿದ್ದರೆ ಅದನ್ನು ತಡೆಗಟ್ಟಲು ಯತ್ನಿಸಿ ಎಂದು ನ್ಯಾಯಾಲಯ ಹೇಳಿದ್ದು, ಆಧಾರ್ ಕಾರ್ಡ್ ಅನ್ನು ಎಲ್ಲಾ ಸರ್ಕಾರಿ ಯೋಜನೆಗಳಿಗೂ ಕಡ್ಡಾಯವಾಗಿ ಬಳಸಬೇಕು ಆದರೆ ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು  ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಐದು ಮಂದಿ ನ್ಯಾಯಮೂರ್ತಿಗಳ  ಸಾಂವಿಧಾನಿಕ ಪೀಠದಿಂದ ತೀರ್ಪು ಪ್ರಕಟವಾಗಿದೆ.

ಯಾವುದಕ್ಕೆ ಆಧಾರ್ ಕಡ್ಡಾಯವಲ್ಲ?

  • ಮೊಬೈಲ್ ಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ.
  • ಶಿಕ್ಷಣ ಸಂಸ್ಥೆಗಳಿಗೂ ಆಧಾರ್ ಕಡ್ಡಾಯವಲ್ಲ.
  • ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ.
  • ಮೊಬೈಲ್ ಸಿಮ್ ಕೊಳ್ಳುವುದಕ್ಕೆ ಆಧಾರ್ ಕಡ್ಡಾಯವಲ್ಲ.
  • ಯುಜಿಸಿ, ನೀಟ್ ಮತ್ತು ಸಿಬಿಎಸ್ ಇ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
  • ಖಾಸಗಿ ಸಂಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ.

ಯಾವುದಕ್ಕೆ ಆಧಾರ್ ಕಡ್ಡಾಯ?

  • ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ.
  • ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಕಡ್ಡಾಯ.
  • ಐಟಿ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಡ್ಡಾಯ.