ದೆಹಲಿ: ಸುಪ್ರೀಂ ಕೋರ್ಟ್ ಕಲಾಪದ ನೇರಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಪಾರದರ್ಶಕತೆ ತರುವ ಮೂಲಕ ಸಾರ್ವಜನಿಕ ಹಿತಾಸಕ್ತಿ ಕಾಪಾಡುವುದಾಗಿ ಸುಪ್ರೀಂ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ನ್ಯಾಯಾಲಯದಲ್ಲಿ ವಿಚಾರಣೆಗಳ ನೇರ ಪ್ರಸಾರಕ್ಕೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸುವಂತೆ ಆದೇಶ ಹೊರಡಿಸಿದ್ದಾರೆ.










