ಮಂಡ್ಯ : ನದಿಯಲ್ಲಿ ಮೀನು ಹಿಡಿಯಲು ಹೋಗಿ ಮೂವರು ಯುವಕರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ರೈಲ್ವೆ ಸೇತುವೆ ಬಳಿ ನಡೆದಿದೆ. ಹಾಸನ ಮೂಲದ ಮುಜಾಸಿಮ್(17), ಇಫ್ತಿಕಾರ್(18) ಹಾಗೂ ತೌಸೀಫ್(18) ಮೃತ ಯುವಕರು ಎಂದು ಗುರುತಿಸಲಾಗಿದ್ದು, ಮೃತ ಯುವಕರು ಮೈಸೂರಿನ ಮದರಸಾದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದ್ದು, ಇಂದು ರಜೆ ಇದ್ದ ಕಾರಣ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದು, ಅವನನ್ನು ರಕ್ಷಣೆ ಮಾಡಲು ಉಳಿದ ಇಬ್ಬರು ಯುವಕರು ನೀರಿಗೆ ಧುಮುಕಿದ್ದಾರೆ. ಪರಿಣಾಮ ಮೂವರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಯುವಕನ ಮೃತದೇಹವನ್ನು ಹೊರ ತೆಗೆದಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










