ಕೊಪ್ಪಳ : ಮದ್ಯದ ಅಮಲಿನಲ್ಲಿ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯ ಪತಿ ಹಾಗೂ ಗ್ರಾಮಸ್ಥರು ಸೇರಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ. ಕುಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹನುಮಂತಪ್ಪ ಸ್ಥಳೀಯರಿಂದ ಧರ್ಮದೇಟು ತಿಂದ ವ್ಯಕ್ತಿ. ಈ ವ್ಯಕ್ತಿ ಮದ್ಯದ ಅಮಲಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಸ್ಥಳೀಯರೊಂದಿಗೆ ಸೇರಿ ವ್ಯಕ್ತಿಯ ಕೈಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ವ್ಯಕ್ತಿಯನ್ನು ಕುಕನೂರು ಪೊಲೀಸರಿಗೆ ಒಪ್ಪಿಸಿದ್ದು, ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










