ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮವಾಗಿ ಹಾರಂಗಿ ಜಲಾಶಯ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಡ್ಯಾಂ ನಿಂದ 1500 ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗುತ್ತಿದೆ. 13400 ಕ್ಯೂಸೆಕ್ ಒಳ ಹರಿವು ಇರುವ ಹಿನ್ನೆಲೆ ಯಾವುದೇ ಸಂದರ್ಭದಲ್ಲಿ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಾಧ್ಯತೆ ಇದೆ. ಇದರಿಂದ ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಇನ್ನು ಹಾರಂಗಿ ಜಲಾಶಯ ನಿನ್ನೆ ಭರ್ತಿಯಾದ ಹಿನ್ನೆಲೆ ಸಂಜೆ 4 ಗಂಟೆಯಿಂದ ಎಲ್ಲಾ 4 ಗೇಟ್ ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದೆ.