ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು…

150
firstsuddi

ಬೆಳಗಾವಿ : ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ರುದ್ರಪ್ಪ ವಕ್ಕುಂದ(19) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಯುವಕ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಎನ್.ಡಿ.ಆರ್.ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂಧಿಗಳು ಯುವಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.