ಮಂಡ್ಯ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದು, ಚುನಾವಣಾ ಕಣಕ್ಕಿಳಿದಾಗಿನಿಂದಲೂ ಯಾರ್ಯಾರೋ ಮಾತನಾಡುತ್ತಿದ್ದಾರೆ. ಅಂಬರೀಶ್ ಅವರ ಮುಂದೆ ಕೂರಲಾಗದೇ ಕೈಕಟ್ಟಿ ನಿಲ್ಲುತ್ತಿದ್ದವರು ಈಗ ಅವರು ಇಲ್ಲ ಎಂದು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಆ ಪಕ್ಷದಲ್ಲಿ ಮಹಿಳೆಯರಿಗೆ ಎಷ್ಟು ಗೌರವ ಕೊಡುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿದೆ. ಜಿಲ್ಲೆಯಲ್ಲಿ ಸಾಕಷ್ಟು ಮಹಿಳೆಯರು ನನ್ನದೇ ಸ್ಥಿತಿಯಲ್ಲಿದ್ದು, ಅದು ಅವರಿಗೆ ಮಾಡಿದ ಅಪಮಾನ ಎಂದು ಪ್ರಚಾರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.