ರೈತಾಪಿ ವರ್ಗಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬಹಳಷ್ಟು ಬದಲಾವಣೆಗಳನ್ನು ತರಲಾಗಿದೆ: ಅರೇನಳ್ಳಿ ಪ್ರಕಾಶ್…

699
firstsuddi

ಚಿಕ್ಕಮಗಳೂರು:ಕೃಷಿಕರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನೂ ಕಲ್ಪಿಸುವ ಮೂಲಕ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರೈತ ಸ್ನೇಹಿಯಾಗಿ ರೂಪಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್ ಹೇಳಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸಂತೆ ಕಟ್ಟೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ರೈತಾಪಿ ವರ್ಗಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಗಳನ್ನು ತರಲಾಗಿದೆ, ಆವರಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ, ಸಂತೆ ಕಟ್ಟೆಯನ್ನು ನಿರ್ಮಿಸಿರುವುದರ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದ ಅವರು ಅವುಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಮನವಿ ಮಾಡಿದರು.
ನೂತನ ಸಂತೆ ಕಟ್ಟೆಯನ್ನು ವರ್ತಕರು ಯಾವುದೇ ಕಾರಣಕ್ಕೂ ಆಕ್ರಮಿಸಬಾರದು ಎಂದ ಅವರು ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಎಪಿಎಂಸಿ ನಿರ್ದೇಶಕರಾದ ಬಿ.ಹೆಚ್.ಹರೀಶ್, ಕವೀಶ್, ಶಿವೇಗೌಡ, ಮಹೇಂದರ್, ರಾಜೀವ್, ಧರ್ಮಯ್ಯ, ಜಯಮ್ಮ, ಸುಜಾತ, ಹೆಚ್.ಇ.ಪ್ರಕಾಶ್, ಕಾರ್ಯದರ್ಶಿ ಅಭಿನಂದನ್ ಹಾಜರಿದ್ದರು.