ಸಮ್ಮಿಶ್ರ ಸರ್ಕಾರ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯುತ್ತಿದೆ. – ಶೋಭಾ ಕರಂದ್ಲಾಜೆ…

535

 

ಮೂಡಿಗೆರೆ: ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ವರಿಷ್ಠರ ಸೂಚನೆ ಮೇರೆಗೆ ನಾನು ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಪಕ್ಷದ ಆದೇಶದಂತೆ ನಡೆದುಕೊಳ್ಳುತ್ತೇನೆ. ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಕಡೆ ಬಿಜೆಪಿ ಗೆಲ್ಲುತ್ತದೆ. ಈ ಮೂಲಕ ಬಿಜೆಪಿಗೆ ಜನ ಬೆಂಬಲ ಇದೆ ಎಂಬುದು ಸಾಭೀತಾಗಲಿದೆ. ಕಾಂಗ್ರೆಸ್, ಜೆಡಿಎಸ್ ಒಳಗಡೆಯೇ ಸಾಕಷ್ಟು ಭಿನ್ನಾಭಿಪ್ರಾಯ ಇದೆ. ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯಲಾಗುತ್ತಿದೆ ಎಂದು ಸಮ್ಮಿಶ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.