ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ನಮ್ಮ ಶಾಸಕರಿಗೆ ಏನೆಲ್ಲಾ ಆಮಿಷಗಳನ್ನು ಒಡ್ಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಅವರ ಆಮಿಷಗಳನ್ನು ನಮ್ಮ ಶಾಸಕರು ತಿರಸ್ಕರಿಸಿದ್ದಾರೆ.ಪಕ್ಷದಲ್ಲಿ ಯಾವುದೇ ಅಸಮಾಧಾನಗಳಾಗಲಿ, ಭಿನ್ನಮತಗಳಾಗಲಿ ಇಲ್ಲ, ಸರ್ಕಾರ ಸುಭದ್ರವಾಗಿದೆ. ಬೆಳಗಾವಿ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್ನಿಂದ 5 ಬಾರಿ ಶಾಸಕರಾಗಿದ್ದಾರೆ ಸಚಿವರಾಗಿದ್ದಾರೆ ನಾನು ಕಾಂಗ್ರೆಸ್ ಬಿಡುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಿದ್ದರೂ ಬಿಜೆಪಿಯವರು ಸುಳ್ಳು ಸುದ್ದಿಗಳನ್ನು ಅಪಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.










