ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ನಾನು ಯಾವ ಖಾತೆ ತ್ಯಾಗಕ್ಕೂ ಸಿದ್ದ. ನಮ್ಮ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹೈ ಕಮಾಂಡ್ ಯಾರಿಗೆ ಯಾವ ಖಾತೆ ಎಂದು ನಿರ್ಧರಿಸುತ್ತಾರೆ ಎಂದಿದ್ದಾರೆ.