ಬೆಂಗಳೂರು: ಮೋಟಾರು ವಾಹನ ಮಸೂದೆ ತಿದ್ದುಪಡಿ ವಿರೋಧಿಸಿ ಇಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ಕರೆ ನೀಡಿರುವ ಬಂದ್ ಗೆ ನೀರಸ, ಪ್ರತಿಕ್ರಿಯೆ,ವ್ಯಕ್ತವಾಗಿದ್ದು, ಎಂದಿನಂತೆ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ, ಮೆಟ್ರೋ ಸಂಚಾರ ನಡೆದಿದ್ದು, ಜನಜೀವನ ಎಂದಿನಂತೆ ಸಾಗಿದೆ. ಬೆಂಗಳೂರು ಮಾತ್ರವಲ್ಲದೆ, ಮೈಸೂರು, ಕೋಲಾರ, ಮಂಡ್ಯ, , ಹುಬ್ಬಳ್ಳಿ- ಧಾರವಾಡ ರಾಮನಗರ, ಯಾದಗಿರಿ, ಬೆಳಗಾವಿ, , ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲೂ ಸಾರಿಗೆ ಸಂಚಾರ ಎಂದಿನಂತೇ ನಡೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.