ನಾಳೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್‍ಡೌನ್ ಇರುವುದಿಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ

204
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಬೆಂಗಳುರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್‍ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ನಾಳೆಯಿಂದ ರಾಜ್ಯದ ಯಾವ ಭಾಗದಲ್ಲಿಯೂ ಲಾಕ್‍ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಲಾಕ್‍ಡೌನ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆ, ರಾಜ್ಯದ ಜನತೆಯನ್ನು ಉದ್ದೇಶಿಸಿ ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‍ಡೌನ್ ಒಂದೇ ಪರಿಹಾರವಲ್ಲ. ಈ ಹೋರಾಟದಲ್ಲಿ ರಾಜ್ಯದ ಜನತೆಯೂ ಕೂಡಾ ಸಹಕರಿಸಬೇಕು. ಕೊರೊನಾ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಒಂದೇ ಪರಿಹಾರವಲ್ಲ. ಜನರೂ ಕೂಡಾ ಕಟ್ಟಿನಿಟ್ಟಿನ ಕ್ರಮಕೈಗೊಳ್ಳಬೇಕು. ಪ್ರತಿಯೊಬ್ಬರು ಮಾಸ್ಕ್‍ಗಳನ್ನು ಧರಿಸಬೇಕು. ಮುಖ್ಯವಾಗಿ 50-60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರ ಬರದೇ ಜಾಗರೂಕರಾಗಿರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.