ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದೆ.- ಡಾ.ಜಿ ಪರಮೇಶ್ವರ್…

464
firstsuddi

ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ಕಾರ್ಡ್ ರಸ್ತೆ ಮಂಜುನಾಥ ನಗರದಲ್ಲಿ ನೂತನ ಮೆಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದ್ದು, ಕೆಲ ಜಾಹೀರಾತುದಾರರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ಜಾಹೀರಾತು ಪಾಲಿಸಿ ಮಾಡಲಾಗುವುದು ಎಂದರು.

ಬಿಬಿಎಂಪಿ ಟೆಂಡರ್ ಕರೆಯುವ ಸಂದರ್ಭದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅವಧಿ ನಿಗದಿ ಮಾಡಿದರೂ ಅವಧಿಯೊಳಗೇ ಕಾಮಗಾರಿ ಮುಗಿಯುತ್ತಿಲ್ಲ. ಇದರಿಂದ ಹೆಚ್ಚುವರಿ ಹಣ ವೆಚ್ಚವಾಗುತ್ತಿದೆ. ಹೀಗಾಗಿ ಗುತ್ತಿಗೆದಾರರಿಗೆ ಸಮಯದ ಬಗ್ಗೆ ಎಚ್ಚರಿಕೆ ನೀಡಿ. ದಂಡ ಹಾಕುವ ಅವಕಾಶವೂ ಇದೆ. ಅದನ್ನು ಬಿಬಿಎಂಪಿ ಬಳಸಬಹುದು ಎಂದರು. ಕಸ ನಿರ್ವಹಣೆ, ಅನಧಿಕೃತ ಕೇಬಲ್ ಅಳವಡಿಕೆಯಲ್ಲೂ ಸಾಕಷ್ಟು ಕ್ರಮ ಕೈಗೊಂಡಿದ್ದೇವೆ. 8 ಸಾವಿರ ಕಿ.ಮೀ. ಅನಧಿಕೃತ ಕೇಬಲ್ ತೆರವು ಗೊಳಿಸಿದ್ದೇವೆ ಎಂದು ತಿಳಿಸಿದರು.