ಕೆಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು…

338
firstsuddi

ಶಿರಾ -ರಾಷ್ಟ್ರೀಯ ಹೆದ್ದಾರಿಯ 4 ರ ಕಳ್ಳಂಬೆಳ್ಳ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್ ಗೆ ಖಾಸಗಿ ಬಸ್ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಬಸ್ ನಲ್ಲಿದ್ದ ಇಬ್ಬರು ಮತ್ತು ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಮೃತರು ಪರಮೇಶ್ವರ ನಾಯ್ಕ (50), ನಿಖೀತಾ , ಧನರಾಜ್(45) ಎಂದು ತಿಳಿದುಬಂದಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.