ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಮಕ್ಕಳ ದುರ್ಮರಣ…

203
firstsuddi

ದೆಹಲಿ : ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಶೋಕ್‌ ವಿಹಾರ್‌ ಪ್ರದೇಶದಲ್ಲಿ  ನಡೆದಿದೆ. ಈ ವಿಷಯ ತಿಳಿದು ಸ್ಥಳಕ್ಕಾಗಾಮಿಸಿದ ರಕ್ಷಣಾ ಸಿಬ್ಬಂದಿಗಳು ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು  ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.