ಮೈಸೂರು- ಹೆಚ್.ಡಿ ಕೋಟೆ ತಾಲೂಕಿನ ಖಾರಾಪುರ ಗ್ರಾಮದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.ಆದರೆ ಇಂದು ಬೆಳಿಗ್ಗೆ ಕಬಿನಿ ಹಿನ್ನೀರಿನಲ್ಲಿ ಹುಲಿಯ ಶವ ಪತ್ತೆಯಾಗಿದ್ದು.ಹುಲಿಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.