ರಾಜ್ಯ ಇಂದು 10 ಹೊಸ ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ…

132
firstsuddi

ಬೆಂಗಳೂರು : ರಾಜ್ಯದಲ್ಲಿ ಇಂದು 10 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ದಾವಣಗೆರೆ-3, ಬೀದರ್-2, ಬಾಗಲಕೋಟೆ-2, ಕಲಬುರಗಿ, ಹಾವೇರಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.