ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 11 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ಮಂಡ್ಯ ಜಿಲ್ಲೆ ಒಂದರಲ್ಲೇ 8 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.










