ಕರ್ನಾಟಕದಲ್ಲಿ ಇಂದು ಒಂದೇ ದಿನ 138 ಕೊರೊನಾ ಪ್ರಕರಣ ಪತ್ತೆ…

150
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 138 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಇಂದು ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 105 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 33 ಕೊರೊನಾ ಪ್ರಕರಣ ಪತ್ತೆಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.