ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಇಂದು ಒಂದೇ ದಿನ 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ದಕ್ಷಿಣ ಕನ್ನಡ-3, ಬೆಂಗಳೂರು-2 ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.










