ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 196 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…

194
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 196 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,939ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ ಯಾದಗಿರಿ ಜಿಲ್ಲೆಯೊಂದರಲ್ಲೇ 72 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದ್ದು, ರಾಯಚೂರು 39, ಮಂಡ್ಯ 28, ಚಿಕ್ಕಬಳ್ಳಾಪುರ 20, ಗದಗ್ 15, ಬೆಂಗಳೂರು 4, ಹಾಸನ 4, ದಕ್ಷಿಣ ಕನ್ನಡ 3, ದಾವಣಗೆರೆ 3, ಕೋಲಾರ 2, ಉತ್ತರ ಕನ್ನಡ 2, ಕಲಬುರಗಿ, ಬೆಳಗಾವಿ, ಉಡುಪಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.