ರಾಜ್ಯದಲ್ಲಿ ಇಂದು ಒಂದೇ ದಿನ 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ…

822
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿ ಜಿಲ್ಲೆಯೊಂದರಲ್ಲೇ 14 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು-3, ವಿಜಯಪುರ-2 ದಕ್ಷಿಣ ಕನ್ನಡ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ರಾಜ್ಯದಲ್ಲಿ 557 ಮಂದಿ ಸೋಂಕಿತರ ಪೈಕಿ 223 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 21 ಮಂದಿ ಮೃತಪಟ್ಟಿದ್ದಾರೆ. ಹಾಗೂ ಇನ್ನುಳಿದ 313 ಮಂದಿ ರಾಜ್ಯದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.