ಕನಾಟಕದಲ್ಲಿ ಇಂದು ಒಂದೇ ದಿನ 28 ಕೊರೊನಾ ಪ್ರಕರಣ ಪತ್ತೆ-ಒಂದು ಸಾವು…

526
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 28 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 642ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯ 56 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ದಾವಣಗೆರೆ ಜಿಲ್ಲೆ ಒಂದರಲ್ಲೇ 21 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಮಂಡ್ಯ-2, ಕಲಬುರಗಿ-2, ವಿಜಯಪುರ, ಬೆಂಗಳೂರು, ಹಾಗೂ ಹಾವೇರಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.
ಗ್ರೀನ್ ಜೋನ್ ಪಟ್ಟಿಗೆ ಸೇರಿಕೊಂಡಿದ್ದ ಹಾವೇರಿ ಜಿಲ್ಲೆಯಲ್ಲಿ ಇಂದು ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈಗಾ ಹಾವೇರಿ ಜಿಲ್ಲೆಯನ್ನು ಆರೆಂಜ್ ಜೋನ್‍ಗೆ ಸೇರಿಸಲಾಗಿದೆ.