ಬೆಂಗಳುರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ವೇಗವಾಗಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 42 ಕೊರೊನ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ 15 ಕಕೊರೊನಾ ಪ್ರಕರಣ ಪತ್ತೆಯಾಗಿದ್ದು, ಧಾರವಾಡ-9, ಹಾಸನ-5, ಯಾದಗಿರಿ-2, ದಕ್ಷಿಣ ಕನ್ನಡ-2, ಬೀದರ್-2, ಬೆಂಗಳೂರು-3, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 904 ಮಂದಿ ಸೋಂಕಿತರ ಪೈಕಿ 426 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 31 ಮಂದಿ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನುಳಿದ 447 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.










