ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಇಂದು ಒಂದೇ ದಿನ 45 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ಇಂದು ದಾವಣಗೆರೆ-14, ಉತ್ತರ ಕನ್ನಡ ಜಿಲ್ಲೆಯಲ್ಲಿ 5 ತಿಂಗಳ ಮಗು ಹಾಗೂ 3 ವರ್ಷದ ಬಾಲಕಿ ಸೇರಿ 12, ಬೆಳಗಾವಿ-11, ಬೆಂಗಳೂರು-7 ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವು ದೃಢವಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.










