ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…

268
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈಗಾ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಮೂಡಿಗೆರೆಯಲ್ಲಿ 1, ತರೀಕೆರೆ-1 ಹಾಗೂ ಎನ್.ಆರ್. ಪುರ ತಾಲ್ಲೂಕಿನಲ್ಲಿ ಮುಂಬೈನಿಂದ ಆಗಮಿಸಿದ 7, 10 ವರ್ಷದ ಬಾಲಕ ಹಾಗೂ 17 ವರ್ಷದ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಗ್ರೀನ್ ಜೋನ್ ನಲ್ಲಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ 5 ಕೊರೊನಾ ಪ್ರಕರಣ ಪತ್ತೆಯಾಗಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.