ರಾಜ್ಯದಲ್ಲಿ ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 598, ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆ…

187
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಹಾಗೂ ಮಹಾಮಾರಿ ಕೊರೊನಾ ವೈರಸ್‍ಗೆ ರಾಜ್ಯದಲ್ಲಿ ಮತ್ತೆ ಎರಡು ಮಂದಿ ಬಲಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ತುಮಕೂರು-2, ವಿಜಯಪುರ-2, ಬೆಂಗಳೂರು, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢವಾಗಿದೆ.
ಅಲ್ಲದೇ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಬಲಿಯಾದವರ ಸಂಖ್ಯೆಯೂ ಹೆಚ್ಚಾಗಿದ್ದು, ಬೀದರ್ ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೂ ಬೆಂಗಳೂರಿನಲ್ಲಿ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.